ಉತ್ತರ ಪ್ರದೇಶದ ಸಹರಾನ್ಪುರದಲ್ಲಿ ಪೊಲೀಸರ ಎಡವಟ್ಟಿನಿಂದಾಗಿ ವಿಚಿತ್ರ ಘಟನೆಯೊಂದು ನಡೆದಿದೆ. ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯೊಬ್ಬರ ಸ್ವಾಗತಕ್ಕಾಗಿ ಸಿದ್ಧಪಡಿಸಲಾಗಿದ್ದ ‘ಗಾರ್ಡ್ ಆಫ್ ಆನರ್’ (ಗೌರವ ವಂದನೆ)ಯನ್ನು ಪೊಲೀಸರು ಗೊಂದಲಕ್ಕೊಳಗಾಗಿ ಎಐಎಂಐಎಂ ಮುಖ್ಯಸ್ಥ ಹಾಗೂ ಸಂಸದ ಅಸಾದುದ್ದೀನ್ ಓವೈಸಿ ಅವರಿಗೆ ನೀಡಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಭಾರಿ ಚರ್ಚೆಗೆ ಗ್ರಾಸವಾಗಿದೆ. ಈ ಎಡವಟ್ಟಿನ ಬಗ್ಗೆ ಸಂಪೂರ್ಣ ಪೊಲೀಸ್ ತನಿಖೆಗೆ ಆದೇಶಿಸಲಾಗಿದೆ.
ಮೂಲ: ಟಿವಿ9 ಕನ್ನಡ




